ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆ 31 ಕೊರೊನಾ ಪ್ರಕರಣ: ಜನರಲ್ಲಿ ಹೆಚ್ಚಿದ ಆತಂಕ - ಶಿವಮೊಗ್ಗ 31 ಕೊರೊನಾ ಪಾಸಿಟಿವ್ ಪ್ರಕರಣ ಸುದ್ದಿ
ಶಿವಮೊಗ್ಗ: ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ 31 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಪ್ರಕರಣ 253ಕ್ಕೆ ಏರಿದೆ. ಇದುವರೆಗೂ 117 ಸೋಂಕಿತರು ಬಿಡುಗಡೆಯಾಗಿದ್ದು, ಆಸ್ಪತ್ರೆಯಲ್ಲಿ 132 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ ನಾಲ್ವರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದಲ್ಲಿ 14, ಶಿಕಾರಿಪುರ 5, ಭದ್ರಾವತಿ 2, ಸಾಗರ 2, ಹೊಸನಗರ 2 ಹಾಗೂ ಸೊರಬದಲ್ಲಿ 11 ಪ್ರಕರಣಗಳು ನಿನ್ನೆ ದಾಖಲಾಗಿವೆ.