33ನೇ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟ - ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜು
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯ ಹಾಗೂ ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ 33ನೇ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟವು ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ 54 ಕಾಲೇಜುಗಳಿಂದ ಬಂದಿದ್ದ ವಿದ್ಯಾರ್ಥಿಗಳು ರಿಲೇ, ಓಟ,ಲಾಂಗ್ ಜಂಪ್, ಹೈ ಜಂಪ್, ಜಾವಲಿನ್ ಥ್ರೋ ಹಾಗೂ ಇತರ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದುಕೊಂಡರು.