ಕರ್ನಾಟಕ

karnataka

ETV Bharat / videos

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ‌ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ಹಾನಿ - Latest short circuit news

By

Published : Nov 3, 2020, 6:38 AM IST

ಮುದ್ದೇಬಿಹಾಳ : ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ‌ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿರುವ ಘಟನೆ ತಾಲೂಕಿನ ಮಡಿಕೇಶ್ವರ ಗ್ರಾಮದಲ್ಲಿ ಸೋಮವಾರ ನಡೆದಿದೆ. ತಮಗಾಗಿರುವ ಹಾನಿಗೆ ಪರಿಹಾರ ನೀಡಬೇಕೆಂದು ಹಾನಿಗೊಳಗಾದ ರೈತ ಮಲ್ಲಪ್ಪ ನಿಂಗಪ್ಪ ನಾಯ್ಕೋಡಿ ಹಾಗೂ ಬನ್ನೆಪ್ಪ ಪರಪ್ಪ ನಾಯ್ಕೋಡಿ ಮನವಿ ಮಾಡಿದ್ದಾರೆ. ಒಟ್ಟು 4 ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದ್ದು, ಅಂದಾಜು 5 ಲಕ್ಷ ರೂ. ನಷ್ಟವಾಗಿದೆ ಎಂದು ರೈತರು ತಿಳಿಸಿದ್ದಾರೆ. ಕಬ್ಬಿನ ಗದ್ದೆಗೆ ಬೆಂಕಿ ಬಿದ್ದಿರುವ ವಿಷಯವನ್ನು ತಿಳಿದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಿಸಿದರಾದರೂ ಹೆಚ್ಚಿನ ಹಾನಿ ತಡೆಯಲಾಗಲಿಲ್ಲ.

ABOUT THE AUTHOR

...view details