ಬಜೆಟ್‌ನಲ್ಲಿ ಅನುಭವ ಮಂಟಪಕ್ಕೆ 500 ಕೋಟಿ... ಬಸವ ಭಕ್ತರಲ್ಲಿ ಸಂತಸ - ಗುರುವಾರ ಮಂಡಿಸಿದ ಬಜೆಟ್‌ನಲ್ಲಿ 500 ಕೋಟಿ ರೂ. ಅನುದಾನ
ಶರಣರ ಪವಿತ್ರ ನೆಲ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ಬಜೆಟ್‌ನಲ್ಲಿ 500 ಕೋಟಿ ರೂ. ಅನುದಾನ ನೀಡಿದ್ದಾರೆ. ಜೊತೆಗೆ ಬಿಕೆಡಿಬಿಗೆ ತಕ್ಷಣ 100 ಕೋಟಿ ರೂ. ಬಿಡುಗಡೆ ಮಾಡುವ ಮೂಲಕ ಬಸವ ಭಕ್ತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ಯೋಜನೆಗೆ ವಿದ್ಯುಕ್ತ ಚಾಲನೆ ನೀಡಿದ್ದಾರೆ.