ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಕನಕ ಜಯಂತಿ ಆಚರಣೆ - ಲೆಟೆಸ್ಟ್ ವಿಜಯಪುರ ನ್ಯೂಸ್
ವಿಜಯಪುರ ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಂಯೋಗದಲ್ಲಿ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ 532ನೇ ಕನಕ ಜಯಂತಿಯನ್ನು ಆಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ನೆರವೇರಿಸಿ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, ಕನಕದಾಸರು ಜಾತ್ಯಾತೀತ ತತ್ವಗಳನ್ನು ಪಾಲಿಸಿದವರು. ಕನಕದಾಸರ ಜಯಂತಿ ಕೇವಲ ಆಚರಣೆಯಾಗಬಾರದು ಅವರ ತತ್ವಗಳನ್ನು ಪ್ರತಿವೋರ್ವರು ಅಳವಡಿಸಕೊಂಡಾಗ ಕನಕದಾಸರಿಗೆ ಗೌರವ ಸಲ್ಲುತ್ತದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ, ಅಪರ ಜಿಲ್ಲಾಧಿಕಾರಿ ಹೆಚ್ ಪ್ರಸಾದ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಗೋವಿಂದ ರೆಡ್ಡಿ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.