ಯಾದಗಿರಿಯಲ್ಲಿ 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ - ಇಂಪೀರಿಯಲ್ ಗಾರ್ಡನ್ ಕಾರ್ಯಾಲಯ ಯಾದಗಿರಿ ಸುದ್ದಿ
ಯಾದಗಿರಿ: ಜಿಲ್ಲೆ ಘೋಷಣೆ ಆದ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿಂದು 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿವಿಧ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಗರದ ಇಂಪೀರಿಯಲ್ ಗಾರ್ಡನ್ ಕಾರ್ಯಾಲಯದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ಶಾಸಕ ನಾಗನಗೌಡ ಕಂದಕುರ ಧ್ವಜಾರೋಹಣ ಮಾಡಿ ಚಾಲನೆ ನೀಡಿದರು. ಬಳಿಕ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲೆಗೆ ಪ್ರತ್ಯೇಕ ಸಹಕಾರಿ ಬ್ಯಾಂಕ್ ಆಗಬೇಕಾಗಿದೆ. ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧವಾಗಿರುತ್ತೆ ಎಂದರು.
TAGGED:
ಶಾಸಕ ನಾಗನಗೌಡ ಕಂದಕುರ ಯಾದಗಿರಿ