ಹಳೇ ಶಿವಮೊಗ್ಗದ 7 ವಾರ್ಡ್ಗಳು ಸೀಲ್ಡೌನ್: ಅಲ್ಲಿನ ಪರಿಸ್ಥಿತಿ ಹೇಗಿದೆ ನೋಡೋಣ - coronavirus update
ವಾಣಿಜ್ಯ ಕೇಂದ್ರ ಹಳೇ ಶಿವಮೊಗ್ಗದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಕಂಡು ಬಂದ ಕಾರಣ ಈ ಭಾಗದ 7 ವಾರ್ಡ್ಗಳನ್ನು ಇಂದಿನಿಂದ ಜುಲೈ 30ರ ತನಕ ಸೀಲ್ಡೌನ್ ಮಾಡಲಾಗಿದೆ. ಇಲ್ಲಿ 156 ಕಂಟೈನ್ಮೆಂಟ್ ಝೋನ್ಗಳಿದ್ದು 270 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇಲ್ಲಿ ರ್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಕಿಟ್ ಮೂಲಕ ಆರೋಗ್ಯ ಕಾರ್ಯಕರ್ತರು ಮನೆಮನೆಗೂ ಭೇಟಿ ನೀಡಿ ಪ್ರತಿಯೊಬ್ಬರ ಪರೀಕ್ಷೆ ನಡೆಸುತ್ತಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿರುವ ವಾಕ್ ಥ್ರೂ ಇಲ್ಲಿದೆ.