ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕ ನೀರುಪಾಲು - chikkamagaluru boy dead news
ಚಿಕ್ಕಮಗಳೂರು: ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿರುವ ಘಟನೆ ತಾಲೂಕಿನ ಸುಂಕದಕಟ್ಟೆ ಗ್ರಾಮದಲ್ಲಿ ನಡೆದಿದೆ. ಸಾದರಹಳ್ಳಿ ಗ್ರಾಮದ ವರುಣ್ (15) ನೀರುಪಾಲಾಗಿರುವ ಬಾಲಕ. ಈತ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದಾಗ, ಈಜು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಇನ್ನು, ಬಾಲಕನ ಮೃತದೇಹಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಗ್ರಾಮಸ್ಥರು ಶೋಧ ಕಾರ್ಯ ನಡೆಸಿದ್ದಾರೆ. ಸದ್ಯ, ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.