ಮಂಡ್ಯ: ರಸ್ತೆಯಲ್ಲೇ ಹೊತ್ತಿ ಉರಿದ ಕಾರು - ಮಂಡ್ಯ ಲೇಟೆಸ್ಟ್ ನ್ಯೂಸ್
ಮಂಡ್ಯ: ರಸ್ತೆಯಲ್ಲಿ ಕಾರು ಹೊತ್ತಿ ಉರಿದ ಘಟನೆ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಭೂ ವರಹನಾಥ ದೇವಾಲಯದ ರಸ್ತೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ದೇವಾಲಯಕ್ಕೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ ಹಿಂದೆ ಬರುತ್ತಿದ್ದ ವಾಹನ ಚಾಲಕರು ಕೂಡಲೇ ಕಾರಿನಲ್ಲಿದ್ದರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.