ಸುದೀರ್ಘ ಸೇವೆ ಸಲ್ಲಿಸಿ ತಾಯ್ನಾಡಿಗೆ ಮರಳಿದ ನಿವೃತ್ತ ಯೋಧನಿಗೆ ಅದ್ದೂರಿ ಸನ್ಮಾನ - ಯೋಧನಿಗೆ ಅದ್ದೂರಿ ಸನ್ಮಾನ
ಹುಬ್ಬಳ್ಳಿ: ಭಾರತೀಯ ಸೇನೆಯಲ್ಲಿ 17 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಬಳಿಕ ನಿವೃತ್ತಿಯಾಗಿ ತಾಯ್ನಾಡಿಗೆ ಮರಳಿದ ಯೋಧನಿಗೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅದ್ದೂರಿಯಾಗಿ ಸನ್ಮಾನ ಮಾಡಲಾಯಿತು. ಹುಬ್ಬಳ್ಳಿ ತಾಲೂಕಿನ ಬಮ್ಮಸಮುದ್ರ ಗ್ರಾಮದ ರಾಯಪ್ಪ ಮಂಟಗಾನಿ, ಜಮ್ಮುಕಾಶ್ಮೀರ, ಪಂಜಾಬ್, ಅಸ್ಸಾಂ ಸೇರಿದಂತೆ ಹಲವೆಡೆ ಸೇವೆ ಸಲ್ಲಿಸಿ, ನಿವೃತ್ತಿ ಮೇರೆಗೆ ತಾಯ್ನಾಡಿಗೆ ವಾಪಾಸ್ಸಾಗಿದ್ದಾರೆ. ಈ ವೇಳೆ ಮಾತನಾಡಿದ ನಿವೃತ್ತ ಯೋಧ ರಾಯಪ್ಪ, ಯೋಧನಾಗಿ ದೇಶ ಸೇವೆ ಸಲ್ಲಿಸಿದ್ದು ಹೆಮ್ಮೆಯ ವಿಚಾರ. ಎಲ್ಲಾ ಯುವಕರು ಸಹ ದೇಶ ಸೇವೆಗೆ ಸನ್ನದ್ದರಾಗಬೇಕು ಎಂದರು.