ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಕೊಲೆಯ ಶಂಕೆ - ಹಿರೇಕೆರೂರು ಪೊಲೀಸ್ ಠಾಣೆ
ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕು ಗುಂಡಗಟ್ಟಿಯಲ್ಲಿ ವ್ಯಕ್ತಿಯೊರ್ವ ಅನುಮಾನಸ್ಪದವಾಗಿ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿಯು 60 ವರ್ಷದ ಹನುಮಂತಪ್ಪ ಗುಡದಲ್ಲಿ ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ನೇಣುಬಿಗಿದುಕೊಂಡ ರೀತಿಯಲ್ಲಿ ಶವ ಪತ್ತೆಯಾಗಿದೆ. ಪೊಲೀಸರು ಕೊಲೆ ಆರೋಪದ ಮೇಲೆ ಮೃತರ ಪತ್ನಿ ಮತ್ತು ಮಗನನ್ನ ವಶಕ್ಕೆ ಪಡೆದಿದ್ದಾರೆ. ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.