ವೈಕುಂಠ ಏಕಾದಶಿಯ ಪ್ರಯುಕ್ತ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ - Vaikuntha Ekadashi Special Worship
ತುಮಕೂರು : ವೈಕುಂಠ ಏಕಾದಶಿಯ ಪ್ರಯುಕ್ತ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಯ ಬಳಿ ಇರುವ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯವನ್ನು ನೆರವೇರಿಸಲಾಯಿತು. ಕೋವಿಡ್-19 ಹಿನ್ನೆಲೆ ದೇವಾಲಯದೊಳಗೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ದೇವಾಲಯದ ದ್ವಾರದಲ್ಲಿಯೇ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸುವ ರೀತಿ ದೈವಸ್ಥಾನದ ಮಂಡಳಿಯವರು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ವೈಕುಂಠ ಏಕಾದಶಿಯ ದಿನದಂದು ಶ್ರೀ ವೆಂಕಟೇಶ್ವರನ ದರ್ಶನ ಪಡೆದ್ರೆ ತಾವು ಮಾಡಿರುವ ಪಾಪಗಳೆಲ್ಲವೂ ಕಳೆದು ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ಪ್ರತೀತಿ ಇರುವುದರಿಂದ ಬೆಳಗ್ಗೆಯಿಂದಲೂ ಅನೇಕ ಭಕ್ತರು ದೇವಾಲಯಕ್ಕೆ ಆಗಮಿಸಿ ದರ್ಶನ ಪಡೆದರು. ಮಹಿಳೆಯರು ಕೀರ್ತನೆಗಳನ್ನು ಹಾಡುವ ಮೂಲಕ ದೇವರ ಕೃಪೆಗೆ ಪಾತ್ರರಾದರು.