ಪುಲ್ವಾಮಾ ದಾಳಿಗೆ ಒಂದು ವರ್ಷ: ಕಲಬುರಗಿಯಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ - Kalaburagi news
ಕಲಬುರಗಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪುಲ್ವಾಮಾ ದಾಳಿಗೆ ಒಂದು ವರ್ಷ ಕಳೆದ ಹಿನ್ನೆಲೆ ಕಲಬುರಗಿ ನಗರದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನಗರದ ಎಸ್‌ವಿಪಿ ವೃತ್ತದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ನೇತೃತ್ವದಲ್ಲಿ ಹಾಗೂ ಟೌನ್ ಹಾಲ್ ಪ್ರದೇಶದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತ್ಯೇಕವಾಗಿ ಶೃದ್ಧಾಂಜಲಿ ಸಲ್ಲಿಸಿದರು. ಹುತಾತ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಭಾರತ ಮಾತೆಗೆ ಹಾಗೂ ಯೋಧರ ಹೆಸರಿನಲ್ಲಿ ಜೈಘೋಷ ಕೂಗಿದರು.
Last Updated : Feb 14, 2020, 1:55 PM IST