ಆಲಿಕಲ್ಲು ಮಳೆಯಲ್ಲಿಯೇ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ - Kannada new s
ಕೊಪ್ಪಳ: ಜಿಲ್ಲೆಯ ಚಿಕ್ಕಬಗನಾಳ ಗ್ರಾಮದಲ್ಲಿ ಸುರಿದ ಆಲಿಕಲ್ಲು ಮಳೆಗೆ ಗ್ರಾಮಸ್ಥರು ಕುಣಿದು ಕುಪ್ಪಳಿಸಿದ್ದಾರೆ. ಇನ್ನು ಮಳೆಯ ನಡುವೆಯೂ ಗ್ರಾಮದ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕರಡಿ ಸಂಗಣ್ಣ ಗೆಲುವು ಸಾಧಿಸಿದ್ದಕ್ಕೆ ಆಲಿಕಲ್ಲು ಮಳೆಯಲ್ಲಿಯೇ ಹಲುಗೆ ಬಾರಿಸಿ, ನೃತ್ಯ ಮಾಡುವ ಮೂಲಕ ವಿಜಯೋತ್ಸವ ಆಚರಿಸಿದರು.