ಬೆಂಗಳೂರು, ಕೋಲಾರ, ಚಿಂತಾಮಣಿ ಸೇರಿ ಹಲವು ಕಡೆ ಎಸಿಬಿ ದಾಳಿ - Kolar
ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ನಿರ್ದೇಶಕರ ನಿವಾಸಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಹಲವು ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ನಿರ್ದೇಶಕ ನಾರಾಯಣಸ್ವಾಮಿ ಅವರಿಗೆ ಸೇರಿದ, ಬೆಂಗಳೂರು, ಕೋಲಾರ, ಹಾಗೂ ಚಿಂತಾಮಣಿಯಲ್ಲಿನ ನಿವಾಸಗಳ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.