ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು - ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿ
ಕಲಬುರಗಿ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಲಬುರಗಿ ತಾಲೂಕಿನ ಫರತಾಬಾದ್ ಬಳಿ ನಡೆದಿದೆ. ಫರತಾಬಾದ್ ಹಾಗರಗುಂಡಗಿ ರಸ್ತೆಯಲ್ಲಿ ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿವೆ. ಕಲವಗಾ ಗ್ರಾಮದ ಕುಮಾರ್ (23) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.