ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ: ಚಾಲಕನ ಸಾವು - Truck driver death
ಉಡುಪಿ : ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲ ಮಸೀದಿ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಟ್ಟು ನಿಂತಿತ್ತು. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ