ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ: ರಸ್ತೆ ಮಧ್ಯದಲ್ಲೇ ಧಗಧಗ ಹೊತ್ತಿ ಉರಿದ ಕಾರು - car
ಬೆಂಗಳೂರು: ಹೆಬ್ಬಾಳದಿಂದ ಸಿಟಿ ಕಡೆಗೆ ಚಲಿಸುತ್ತಿದ್ದ ಕಾರಿನಲ್ಲಿ ತಾಂತ್ರಿಕ ದೋಷ ಕಂಡು ಬಂದು ರಸ್ತೆ ಮಧ್ಯದಲ್ಲೇ ಹೊತ್ತಿ ಉರಿದಿರುವ ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಶ್ರೀಧರ್ ಕಾರಿನಿಂದ ಧುಮಿಕಿ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಆಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಬಗ್ಗೆ ಸದಾಶಿವ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.