ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಗಂಧದಕಡ್ಡಿ ತುಂಬಿದ ಲಾರಿ - ಮೈಸೂರು ಗಂಧದಕಡ್ಡಿ ತುಂಬಿದ ಲಾರಿಗೆ ಬೆಂಕಿ
ಮೈಸೂರು: ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಗಂಧದಕಡ್ಡಿ ತುಂಬಿದ ಲಾರಿ ಹೊತ್ತಿ ಉರಿದ ಘಟನೆ ಮೈಸೂರು-ನಂಜನಗೂಡು ರಸ್ತೆಯಲ್ಲಿ ನಡೆದಿದೆ. ಕಡಕೋಳ ಕೈಗಾರಿಕಾ ಪ್ರದೇಶದಿಂದ ಮೈಸೂರು ಕಡೆಗೆ ಗಂಧದಕಡ್ಡಿಯ ಲೋಡ್ ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಘಟನೆಯಲ್ಲಿ ಸುಮಾರು 6 ಲಕ್ಷ ರೂ. ಮೌಲ್ಯದ ಗಂಧದಕಡ್ಡಿ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ, ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.