ಪತ್ನಿ ಪ್ರಿಯಾಂಕ ಜತೆ ಆಗಮಿಸಿ ಮತ ಚಲಾಯಿಸಿದ ಉಪೇಂದ್ರ - Actor Upendra
ಉತ್ತಮ ಪ್ರಜಾಕೀಯ ಪಕ್ಷದ ಮುಖ್ಯಸ್ಥ ಉಪೇಂದ್ರ ತಮ್ಮ ಪತ್ನಿ ಪ್ರಿಯಾಂಕ ಜೊತೆ ಆಗಮಿಸಿ ಮತದಾನ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕತ್ತರಿಗುಪ್ಪೆಯ ವಿದ್ಯಾ ವಾಹಿನಿ ಪದವಿ ಪೂರ್ವ ಕಾಲೇಜಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಮತದಾನ ಮಾಡಿ ಖುಷಿ ತಂದಿದೆ. ಎಲ್ಲರೂ ತಮ್ಮ ಹಕ್ಕು ಚಲಾಯಿಸಬೇಕು. ಪ್ರಜಾಕೀಯಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದರು.