ನಟಿ ಜಯಶ್ರೀ ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ - ಜಯಶ್ರೀ ಮೃತದೇಹ
ಬಿಗ್ ಬಾಸ್ ಮೂಲಕ ಗುರುತಿಸಿಕೊಂಡಿದ್ದ, ನಟಿ ಜಯಶ್ರೀ ಬೆಂಗಳೂರಿನ ಸಂಧ್ಯಾ ಕಿರಣ ವೃದ್ಧಾಶ್ರಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಯಶ್ರೀ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾದ ಜಯಶ್ರೀ ಈ ಹಿಂದೆ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.