ನಟಿ ರಾಗಿಣಿ ಬಿಗ್ ಬಾಸ್ ಮನೆಗೆ ಹೋಗಲ್ವಂತೆ! - ಬಿಗ್ ಬಾಸ್ ಸೀಸನ್ 7
ಬೆಂಗಳೂರು: ಬಿಗ್ ಬಾಸ್ ಸೀಸನ್ 7 ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಇದರ ಜೊತೆಗೆ ಬಿಗ್ ಬಾಸ್ ಮನೆಗೆ ಪ್ರವೇಶಿಸುವ ಸ್ಪರ್ಧಿಗಳ ಪೈಕಿ ನಟಿ ರಾಗಿಣಿ ದ್ವಿವೇದಿ ಹೆಸರೂ ಕೂಡ ಹರಿದಾಡುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ನಟಿ, ನಾನು ಬಿಗ್ ಬಾಸ್ಗೆ ಹೋಗುತ್ತಿಲ್ಲ. ಆಯೋಜಕರು ನನ್ನ ಹೆಸರನ್ನು ಪದೇಪದೇ ಹೇಳುತ್ತಿದ್ದಾರೆ. ಈ ಬಗ್ಗೆ ನಾನು ಹಲವು ಬಾರಿ ಪ್ರತಿಕ್ರಿಯೆ ಕೂಡ ನೀಡಿದ್ದೇನೆ. ಮತ್ತೊಮ್ಮೆ ನನ್ನ ಪ್ರಶ್ನಿಸಬೇಡಿ ಎಂದು ಹೇಳಿದ್ದಾರೆ.