ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕ ನಂತರವಷ್ಟೇ ಬೆಂಗಳೂರಿನಲ್ಲಿ ಲಾಕ್‌ಡೌನ್ ಸಡಿಲಿಕೆ - Bangalore City
ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್ಗಳ ಪೈಕಿ 177 ವಾರ್ಡ್ಗಳಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿಲ್ಲ. ಉಳಿದ 21 ವಾರ್ಡ್ಗಳು ಕಂಟೈನ್ಮೆಂಟ್ ಝೋನ್ನಲ್ಲಿವೆ. ಆದ್ದರಿಂದ ಗ್ರೀನ್ ಜೋನ್‌ಗಳಲ್ಲಿ ನೀಡಿರುವ ಲಾಕ್‌ಡೌನ್ ಸಡಿಲಿಕೆಯನ್ನು ಬೆಂಗಳೂರಿನ 177 ವಾರ್ಡ್ಗಳಲ್ಲಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಕಾರ್ಯದರ್ಶಿಗಳ ಮುಖಾಂತರ ಪತ್ರ ಬರೆದಿದ್ದೇವೆ. ಕೇಂದ್ರ ಸರ್ಕಾರದಿಂದ ಅನುಮತಿ ಬಂದ ನಂತರ ಈ ವಾರ್ಡ್ಗಳಲ್ಲಿ ನಿಯಮ ಸಡಿಲಿಕೆ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದರು.