ಸಸ್ಯಕಾಶಿ ಕಪ್ಪತ್ತಗುಡ್ಡಕ್ಕೆ ಮತ್ತೆ ಬೆಂಕಿ: ಅಪಾರ ಪ್ರಮಾಣದ ವನ್ಯಸಂಪತ್ತು ನಾಶ - ಗದಗ ಜಿಲ್ಲೆಯ ಕಪ್ಪತ್ತಗುಡ್ಡ
ಉತ್ತರ ಕರ್ನಾಟಕದ ಸಹ್ಯಾದ್ರಿ ಅಂತ ಕರೆಸಿಕೊಳ್ಳುವ ಕಪ್ಪತ್ತಗುಡ್ಡಕ್ಕೆ ಮತ್ತೆ ಬೆಂಕಿ ಬಿದ್ದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ವ್ಯಾಪ್ತಿಯ ಡಂಬಳ-ನಾರಾಯಣಪುರ ಮಾರ್ಗ ಮಧ್ಯೆ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣ ಸಸ್ಯ ಸಂಪತ್ತು, ಔಷಧೀಯ ಗಿಡಮೂಲಿಕೆಗಳು ಸಂಪೂರ್ಣ ಅಗ್ನಿಗಾಹುತಿಯಾಗಿದೆ. ರೈತರು ತಮ್ಮ ಜಮೀನಿನಲ್ಲಿ ಕಸವನ್ನು ಸುಡುವಾಗ ಅದರ ಬೆಂಕಿ ಕಪ್ಪತ್ತಗುಡ್ಡಕ್ಕೆ ಬಿದ್ದಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ವತಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.