ಮತ್ತೊಮ್ಮೆ ಬೀದಿಗಿಳಿಯಲಿದ್ದಾರೆ ಸಾರಿಗೆ ಸಂಸ್ಥೆ ನೌಕರರು... ನಾಳೆ ಬಸ್ಗಳ ಸೇವೆ ಇರುತ್ತಾ? - ಬೆಂಗಳೂರಿನಲ್ಲಿ ಪ್ರತಿಭಟನೆ
ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ಮತ್ತೊಮ್ಮೆ ಸಾರಿಗೆ ನೌಕರರು ಬೀದಿಗಿಳಿಯಲಿದ್ದಾರೆ. ನಾಳೆ ಸ್ವಾತಂತ್ರ್ಯ ಉದ್ಯಾನದಲ್ಲಿ ಮತ್ತೊಮ್ಮೆ ಪ್ರತಿಭಟನೆಗೆ ಸಜ್ಜಾಗಿರುವ ನೌಕರರು, ಮತ್ತೊಮ್ಮೆ ಸರ್ಕಾರದ ಕಣ್ಣು ತೆರೆಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ಜೊತೆಗೆ ಸಾರಿಗೆ ನೌಕರ ತಿಪ್ಪೇಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.