ನಾನು ಯಡಿಯೂರಪ್ಪ ಪಕ್ಕಾ ಶಿಷ್ಯ: ಶಾಸಕ ಎಂ.ಪಿ ಕುಮಾರಸ್ವಾಮಿ - kannadanews
ಬೆಂಗಳೂರು: ಸಚಿವ ಸ್ಥಾನ ಸಿಕ್ಕಿಲ್ಲ ಅಂತ ನನಗೆ ಬೇಸರವಿಲ್ಲ. ನಾನು ಸಚಿವ ಸ್ಥಾನ ಕೇಳಿರಲಿಲ್ಲ ಅಂತ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ತಿಳಿಸಿದ್ರು. ಸಿಎಂ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ನಾನು ಯಡಿಯೂರಪ್ಪ ಅವರ ಪಕ್ಕಾ ಶಿಷ್ಯ,ಯಡಿಯೂರಪ್ಪ ನಮ್ಮ ನಾಯಕರು, ಮುಂದಿನ ಹಂತದಲ್ಲಿ ಸಚಿವ ಸ್ಥಾನ ಕೊಡಿ ಅಂತ ನಾನು ಕೇಳಿಲ್ಲ ಅಂತ ಹೇಳಿದ್ರು. ಇನ್ನು ಡಿಸಿಎಂಗಳ ನೇಮಕ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲ್ಲ ಅಂತ ಹೇಳಿ ತೆರಳಿದರು.