ಎಲೆಕ್ಟ್ರಿಕ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ: ವಸ್ತುಗಳು ಸುಟ್ಟು ಕರಕಲು - ಬೀದರ್ ಜಿಲ್ಲೆಯ ಬಸವಕಲ್ಯಾಣ
ಬಸವಕಲ್ಯಾಣ(ಬೀದರ್): ಎಲೆಕ್ಟ್ರಿಕಲ್ ಅಂಗಡಿಯೊಂದರ ಗೊಡೌನ್ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ನಗರದ ಚಮನ್ ಗಾರ್ಡ್ನಲ್ಲಿರುವ ನಗರಸಭೆ ಕಾಂಪ್ಲೆಕ್ಸ್ನಲ್ಲಿ ಘಟನೆ ನಡೆದಿದೆ. ಸುದ್ದಿ ತಿಳಿದು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು.