ಪೌರತ್ವ ತಿದ್ದುಪಡಿ ವಿರೋಧಿಸಿ ಅಂಜುಮನ್ ಇಸ್ಲಾಂ ಸಂಸ್ಥೆಯಿಂದ ಪ್ರತಿಭಟನೆ - ಅಂಜುಮನ್ ಇಸ್ಲಾಂ ಸಂಸ್ಥೆ ಪ್ರತಿಭಟನೆ
ಹುಬ್ಬಳ್ಳಿ: ಅಂಜುಮನ್ ಇಸ್ಲಾಂ ಸಂಸ್ಥೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿತು. ದೇಶದ ಅಲ್ಪಸಂಖ್ಯಾತರ, ದಲಿತರ ವಿರೋಧಿಯಾಗಿರುವ ಪೌರತ್ವ ಕಾಯ್ದೆಯನ್ನು ರದ್ದುಗೊಳಿಸುವಂತೆ ಸುಮಾರು ಎರಡು ತಿಂಗಳಿಂದ ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಮಾತ್ರ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಕೂಡಲೇ ಕೇಂದ್ರ ಸರ್ಕಾರ ಸಿಎಎ, ಎನ್ಆರ್ಸಿ ಕೈ ಬಿಡಬೇಕು. ಇಲ್ಲವಾದರೆ ಮುಂಬರುವ ದಿನ ಉಗ್ರವಾದ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಬಾಬಾಜಾನ ಮುದೋಳ, ಮುಸ್ತಾಕ ಬ್ಯಾಳಿ,ಎ.ಎಂ.ಹಿಂಡಸಗೇರಿ,ಯುಸೂಫ್ ಸವಣೂರ ಸೇರಿದಂತೆ ಇತರರು ಇದ್ದರು.