ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ವೇಳೆ ನಡೆದ ವಾದ-ವಿವಾದ.. ವಿಡಿಯೋ
ಬೆಂಗಳೂರು : ನಿನ್ನೆ ವಿಧಾನಸಭೆಯಲ್ಲಿ ವಿವಾದಿತ ಗೋಹತ್ಯೆ ನಿಷೇಧ ಮಸೂದೆಯನ್ನು ಬಿಜೆಪಿ ಸರ್ಕಾರ ಮಂಡಿಸಿ ಅಂಗೀಕಾರ ಪಡೆಯಿತು. ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ಪ್ರತಿಭಟನೆಯ ಮಧ್ಯೆಯೇ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಮಂಡಿಸಿದ್ದರು. ಈ ವೇಳೆ ಇದನ್ನು ವಿರೋಧಿಸಿ, ಸದನದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ನಡೆದ ವಾಗ್ವಾದ ನಡೆಯಿತು.