ಪ್ರತಿಭಟನೆ ಮಧ್ಯೆ ಅಂಗೀಕಾರಗೊಂಡ ಗೋಹತ್ಯೆ ನಿಷೇಧ ವಿಧೇಯಕ: ವಿಡಿಯೋ
ಬೆಂಗಳೂರು: ಕರ್ನಾಟಕ ಗೋ ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ 2020ನ್ನು ಸರ್ಕಾರ ಮಂಡಿಸಿದೆ. ಕಾಂಗ್ರೆಸ್ನ ತೀವ್ರ ಆಕ್ಷೇಪದ ಮಧ್ಯೆ ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ವಿಧೇಯಕವನ್ನು ಮಂಡಿಸಿದ್ದರು. ಚರ್ಚೆ ಇಲ್ಲದೆ ಗೋ ಹತ್ಯೆ ನಿಷೇಧ ವಿಧೇಯಕವನ್ನು ಅಂಗೀಕರಿಸಲಾಗಿದ್ದು, ಕಾನೂನು ಸಚಿವ ಮಾಧುಸ್ವಾಮಿ ವಿಧೇಯಕದ ಪ್ರಮುಖ ಅಂಶಗಳ ಬಗ್ಗೆ ವಿವರಣೆ ನೀಡಿದ್ದಾರೆ. ಈ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.