ಕೊರೊನಾ ಭೀತಿಯಿಂದ ವಿಜಯಪುರದ ಎಪಿಎಂಸಿ ಮಾರುಕಟ್ಟೆ ಬಂದ್: ರೈತರ ಪರದಾಟ - ಸಾರ್ವಜನಿಕರು ಎಪಿಎಂಸಿ ಮಾರುಕಟ್ಟೆಗೆ ಬರಲು ಅನುಮತಿ ನೀಡಿಲ್ಲ
ವಿಜಯಪುರ: ಕೊರೊನಾ ಭೀತಿಯಿಂದ ವಿಜಯಪುರ ನಗರದ ಎಪಿಎಂಸಿ ಮಾರುಕಟ್ಟೆ ಬಂದ್ ಮಾಡಲಾಗಿದೆ. ಇದರಿಂದ ಜಿಲ್ಲೆಯ ರೈತರಿಗೆ ದ್ರಾಕ್ಷಿ, ನಿಂಬೆ, ದಾಳಿಂಬೆ ಹಣ್ಣುಗಳು ಹಾಗೂ ತರಕಾರಿ ಮಾರಾಟ ಮಾಡಲು ಪರದಾಡುವಂತಾಗಿದೆ. ನಾಳೆ ಜಿಲ್ಲಾಧಿಕಾರಿ ವೈಎಸ್ ಪಾಟೀಲ್ ತರಕಾರಿ ಮಾರಾಟಕ್ಕೆ ಅನುಮತಿ ನೀಡಿದ್ದರೂ, ಆದರೆ ಸಾರ್ವಜನಿಕರು ಎಪಿಎಂಸಿ ಮಾರುಕಟ್ಟೆಗೆ ಬರಲು ಅನುಮತಿ ನೀಡಿಲ್ಲ. ತಳ್ಳು ಗಾಡಿಯ ತರಕಾರಿ ವ್ಯಾಪಾರಿಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.