ಸಚಿವ ಸಂಪುಟದಲ್ಲಿ ಕೊಡಗಿಗೆ ಸಿಗದ ಆದ್ಯತೆ: ಶಾಸಕ ಅಪ್ಪಚ್ಚು ರಂಜನ್ ಅಸಮಾಧಾನ - Kodagu MLA Appacchu Ranjan
ಕೊಡಗು: ಎಲ್ಲ ಸ್ಥಳೀಯ ಸಂಸ್ಥೆಗಳಲ್ಲೂ ಬಿಜೆಪಿ ಆಡಳಿತವಿದ್ದರೂ ಸಂಪುಟ ವಿಸ್ತರಣೆ ವೇಳೆ ಜಿಲ್ಲೆಗೆ ಸರಿಯಾದ ಆದ್ಯತೆ ನೀಡಿಲ್ಲ ಎಂದು ಶಾಸಕ ಅಪ್ಪಚ್ಚು ರಂಜನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕೊಡಗು ಕಾಂಗ್ರೆಸ್ ಮುಕ್ತ ಜಿಲ್ಲೆ. ಹೀಗಾಗಿ ಸಚಿವ ಸಂಪುಟದಲ್ಲಿ ನಮ್ಮನ್ನು ಪರಿಗಣಿಸಬೇಕಿತ್ತು. ಮುಂದಿನ ದಿನಗಳಲ್ಲಿ ಈ ಬಗ್ಗೆ ಗಮನ ಹರಿಸುತ್ತಾರೆ ಎಂಬ ಭರವಸೆಯಿದೆ ಎಂದರು ಅಪ್ಪಚ್ಚು.