ಅವ್ವ ಸೇವಾ ಟ್ರಸ್ಟ್ ವತಿಯಿಂದ ಕೃತಕ ಕಾಲು ಜೋಡಣಾ ಶಿಬಿರ - foot alignment camp
ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರ ಮಾತೋಶ್ರೀ ದಿ. ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ 11ನೇ ಪುಣ್ಯಸ್ಮರಣೆ ದಿನದ ಅಂಗವಾಗಿ ಅವ್ವ ಸೇವಾ ಟ್ರಸ್ಟ್ ವತಿಯಿಂದ ಮಹಾವೀರ ಲಿಂಬ್ ಸೆಂಟರ್ ಇವರ ಸಹಯೋಗದಲ್ಲಿ ನಗರದ ಲ್ಯಾಮಿಂಗ್ಟನ್ ಶಾಲೆಯಲ್ಲಿ ಕೃತಕ ಕಾಲು ಜೋಡಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸುಮಾರು 15ಕ್ಕಿಂತ ಹೆಚ್ಚು ವಿಕಲಚೇತನರಿಗೆ ಕೃತಕ ಕಾಲು ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಮಾಜಿ ಶಾಸಕ ಎನ್.ಹೆಚ್.ಕೋನರೆಡ್ಡಿ, ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ, ಮಹಾವೀರ ಲಿಂಬ್ ಸೆಂಟರ್ ಅಧ್ಯಕ್ಷ ಮಹೇಂದ್ರ ಸಿಂಘಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.