ಸ್ಪರ್ಧಾತ್ಮಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಸಹಾಯಕ ಆಯುಕ್ತ - ಸಹಾಯಕ ಆಯುಕ್ತ ಸಂತೋಷ ಕಾಮಗೌಡ
ರಾಯಚೂರು: ಸಹಾಯಕ ಆಯುಕ್ತ ಸಂತೋಷ ಕಾಮಗೌಡ ವಸತಿ ನಿಲಯದಲ್ಲಿನ ವಿದ್ಯಾರ್ಥಿಗಳಿಗೆ 2 ಗಂಟೆಗಳ ಕಾಲ ಪಾಠ ಮಾಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಹಾಸ್ಟೇಲ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹೇಗೆ ಎದುರಿಸಬೇಕು, ಯಾವ ರೀತಿ ತಯಾರಿಸಿ ನಡೆಸಬೇಕು ಎಂದು ಬೋಧನೆ ಮಾಡಿದರು. ನಂತರ ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷೆ ಪುಸಕ್ತವನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದರು.