ಲಾಕ್ ಡೌನ್ ಆದೇಶ ಪಾಲನೆ: ಅಥಣಿ ಪಟ್ಟಣ ಸಂಪೂರ್ಣ ಸ್ತಬ್ಧ - Athani lockdown
ಅಥಣಿ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸರ್ಕಾರದ ಆದೇಶದಂತೆ ಲಾಕ್ ಡೌನ್ ಜಾರಿಯಾಗಿದೆ. ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮುಂಜಾನೆ ವ್ಯಾಪಾರಸ್ಥರು ವಹಿವಾಟು ನಡೆಸಿದರು. ನಂತರ ಮಧ್ಯಾಹ್ನದ ಹೊತ್ತಿಗೆ ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಜನನಿಬಿಡ ಸ್ಥಳಗಳಿಗೆ ಹೊಗಿ ವಾರ್ನಿಂಗ್ ಮಾಡಿದ ಮೇಲೆ ಅಥಣಿ ಪಟ್ಟಣ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಅಲ್ಲಿ ಇಲ್ಲಿ ಜನರು ಒಡಾಟ ಬಿಟ್ಟರೆ ಅಥಣಿ ಸಂಪೂರ್ಣ ಸ್ಥಗಿತಗೊಂಡಿದೆ.