ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಗೆ ಜನರಿಂದಲೇ ಧರ್ಮದೇಟು - rape issue of kodagu
ವ್ಯಕ್ತಿಯೊಬ್ಬ ಮಾಂಸ ಕೊಡುವ ನೆಪದಲ್ಲಿ, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕೊಡಗಿನ ವಿರಾಜಪೇಟೆ ತಾಲೂಕಿನ ಹೊಳಮಾಳ ಗ್ರಾಮದಲ್ಲಿ ನಡೆದಿದೆ. ಹೊಳಮಾಳ ನಿವಾಸಿ ಬೀರಾನ್ (59) ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದು, ಇದೀಗ ಸ್ಥಳೀಯರಿಂದ ಧರ್ಮದೇಟು ತಿಂದು ಆಸ್ಪತ್ರೆ ಸೇರಿದ್ದಾನೆ. ಬಾಲಕಿ ದೂರಿನ ಮೇರೆಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.