ಹಾಸನ: ಎಸ್ಎಸ್ಎಲ್ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಸಕಲ ಸಿದ್ದತೆ - from department of education
ಹಾಸನ: ಕೋವಿಡ್ ಭೀತಿಯ ನಡುವೆ ಜೂನ್ 25ರಿಂದ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಸುರಕ್ಷತಾ ಕ್ರಮಗಳೊಂದಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್ ವಿತರಣೆ ಹಾಗೂ ಅಂತರ ಪಾಲನೆಗೆ ಕ್ರಮ ಕೈಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 89 ಪರೀಕ್ಷಾ ಕೇಂದ್ರಗಳಲ್ಲಿ 21,257 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಲಾಕ್‌ಡೌನ್ ಹಿನ್ನೆಲೆ ಬೇರೆ ಜಿಲ್ಲೆಗಳಿಗೆ ತೆರೆಳಿದ್ದ 254 ವಿದ್ಯಾರ್ಥಿಗಳು ತಮ್ಮ ಗ್ರಾಮದ ಸಮೀಪದ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಅದೇ ರೀತಿ ಬೇರೆ ಜಿಲ್ಲೆಯ ಒಟ್ಟು 501 ವಿದ್ಯಾರ್ಥಿಗಳು ಹಾಸನ ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಡಿಡಿಪಿಐ ಪ್ರಕಾಶ್ ಈಟಿವಿ ಭಾರತ್ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.