ಸಾಂಸ್ಕೃತಿಕ ಗೀತೆಗಳ ಮೂಲಕ ಮತದಾನ ಕುರಿತು ಜಾಗೃತಿ - news kannada
ದೇಶದ ಪ್ರತಿ ಪ್ರಜೆಯೂ ಮತದಾನ ಮಾಡುವ ಮೂಲಕ ದೇಶ ಕಟ್ಟುವ ಕಾರ್ಯದಲ್ಲಿ ತಮ್ಮ ಕರ್ತವ್ಯ ನಿರ್ವಹಿಸಬೇಕೆಂಬ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರದಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು. ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್, ಜಿಪಂ ಸಿಇಒ ಗುರುದತ್ ಹೆಗ್ಗಡೆ ಸ್ತಬ್ಧ ಚಿತ್ರ ವಾಹನಕ್ಕೆ ಚಾಲನೆ ನೀಡಿದರು. ವಿವಿಧ ಇಲಾಖೆಯ ಅಧಿಕಾರಿಗಳು ಸಾಂಸ್ಕೃತಿಕ ಗೀತೆಗಳನ್ನು ಹಾಡುವ ಮೂಲಕ ಅವರಿಗೆ ಸಾಥ್ ನೀಡಿದರು.