ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ನಿಷೇಧ: ಪೊಲೀಸರಿಂದ ಜಾಗೃತಿ - ganesha statue
ಕೋವಿಡ್ ಬಿಕ್ಕಟ್ಟಿನಿಂದಾಗಿ ಈ ಬಾರಿ ಗಣೇಶ ವಿಗ್ರಹವನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪನೆ ಮಾಡಬಾರದು, ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡುವ ವಿಗ್ರಹವನ್ನು ಕೆರೆ, ಕಟ್ಟೆಗಳಲ್ಲಿ ವಿಸರ್ಜನೆ ಮಾಡಬಾರದು ಎಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸರು ಅರಿವು ಮೂಡಿಸುತ್ತಿದ್ದಾರೆ. ಸಾಧ್ಯವಾದಷ್ಟು ಸರಳವಾಗಿ ಹಬ್ಬ ಆಚರಿಸಬೇಕೆಂದು ಮೈಕ್ಗಳ ಮೂಲಕ ಅನೌನ್ಸ್ ಮಾಡಿ ಜನರಲ್ಲಿ ಮನವಿ ಮಾಡಿದ್ದಾರೆ. ಮನೆ ಹಾಗೂ ದೇವಸ್ಥಾನಗಳಲ್ಲಿ ಮಾತ್ರ ಗಣೇಶ ಮೂರ್ತಿ ಇಟ್ಟು ಪೂಜಿಸಲು ಅವಕಾಶ ನೀಡಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.