ಕೊಪ್ಪಳ:ಹೆಲ್ಮೆಟ್ ಧರಿಸುವಂತೆ ಜಾಗೃತಿ ಜಾಥಾ - Awareness jatha to wear helmet
ಕೊಪ್ಪಳ: ರಸ್ತೆ ಸುರಕ್ಷತಾ ಸಪ್ತಾಹ ನಿಮಿತ್ತ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಜಾಗೃತಿ ಮೂಡಿಸಲು ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ಬೈಕ್ ಏರಿ ಸಿಟಿ ರೌಂಡ್ ಹಾಕಿದರು. ನಗರದ ಅಶೋಕ ಸರ್ಕಲ್ ಬಳಿಯಿಂದ ಜಾಗೃತಿ ಬೈಕ್ ಜಾಥಾಗೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ. ಶ್ರೀಧರ್ ಅವರಿಗೆ ಡಿವೈಎಸ್ಪಿ ವೆಂಕಟಪ್ಪ ನಾಯಕ್, ನಗರ ಠಾಣೆ ಪಿಐ ಮಾರುತಿ ಗುಳ್ಳಾರಿ, ಕೊಪ್ಪಳ ಗ್ರಾಮೀಣ ಠಾಣೆ ಸಿಪಿಐ ವಿಶ್ವನಾಥ ಹಿರೇಗೌಡರ್ ಸಾಥ್ ನೀಡಿದರು. ಹೆಲ್ಮೆಟ್ ಧಾರಿ ನೂರಾರು ಪೊಲೀಸರು ಜಾಥಾದಲ್ಲಿ ಪಾಲ್ಗೊಂಡು ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಸಿಸಬೇಕು ಹಾಗೂ ಲಘು ವಾಹನ ಚಾಲಕರು ಸೀಟ್ ಬೆಲ್ಟ್ ಧರಿಸಬೇಕು. ಈ ಮೂಲಕ ಜೀವ ರಕ್ಷಿಸಿ ಕೊಳ್ಳಬೇಕು ಎಂದು ಜಾಗೃತಿ ಮೂಡಿಸಿದರು.