ಇಟ್ಟಿಗೆ ಮೂಲಕವೂ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಿದ ಚಿಣ್ಣರು! - ಕೊರೊನಾ ಭೀತಿ
ಹುಬ್ಬಳ್ಳಿ: ಕೊರೊನಾ ವೈರಸ್ ಬಗ್ಗೆ ಪ್ರತಿಯೊಬ್ಬರು ಕೂಡ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಆದರೆ, ಇಲ್ಲೊಂದು ಬಾಲಕರ ತಂಡ ಸಾರ್ವಜನಿಕರಿಗೆ ಮನಮುಟ್ಟುವಂತ ಸಂದೇಶದ ಮೂಲಕ ಎಚ್ಚರಿಕೆ ನೀಡಿದ್ದಾರೆ. ಇಟ್ಟಿಗೆ ಮೂಲಕ ಕೊರೊನಾ ವೈರಸ್ ಹೇಗೆ ಹರಡುತ್ತದೆ ಎಂದು ಪ್ರತ್ಯಕ್ಷವಾದ ಚಿತ್ರಣವನ್ನ ತೋರಿಸಿದ್ದಾರೆ. ಅಲ್ಲದೇ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಸಂದೇಶ ರವಾನಿಸಿದ್ದಾರೆ.