ಹುಬ್ಬಳ್ಳಿ : ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಜನ ಜಾಗೃತಿ ಕಾರ್ಯಕ್ರಮ
ಹುಬ್ಬಳ್ಳಿ: ಇದೇ ಡಿ.22 ಹಾಗೂ 27 ರಂದು ಎರಡು ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜನರಿಗೆ ಮತದಾನ ಕುರಿತಂತೆ ಬೀದಿ ನಾಟಕ ಮತ್ತು ಜನಪದ ಸಂಗೀತ ಕಾರ್ಯಕ್ರಮದ ಮೂಲಕ ಜನಜಾಗೃತಿ ಮೂಡಿಸುತ್ತಿದೆ. ಜಿಲ್ಲೆಯ ಕಲಘಟಗಿ ತಾಲೂಕಿನ ಕಂದ್ಲಿ ಹಾಗೂ ದಿಂಬುವಳ್ಳಿ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮಗಳು ಜರುಗಿದವು. ಕುಂದಗೋಳ ತಾಲೂಕು ಹರ್ಲಾಪುರದ ಸಿವೈಸಿಡಿ ಕಲಾ ತಂಡ ಮತ್ತು ಸುಲ್ತಾನಪುರದ ಜನಪದ ಫೌಂಡೇಶನ್ ಕಲಾವಿದರು ಜಾಗೃತಿ ಕಾರ್ಯಕ್ರಮ ನಡೆಸಿಕೊಟ್ಟರು.