
ಯಾದಗಿರಿ: 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಅಂಗವಾಗಿ ಜಾಗೃತಿ ಜಾಥಾ - yadagiri latest news updates
32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ಯಾದಗಿರಿಯಲ್ಲಿ ನಡೆದ ಜಾಗೃತಿ ಜಾಥಾಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ್ ಚಾಲನೆ ನೀಡಿದರು. ನಗರದ ತಹಶೀಲ್ದಾರ್ ಕಚೇರಿಯಲ್ಲಿ ಜಾಗೃತಿ ಎಲ್ಇಡಿ ವಾಹನಕ್ಕೆ ಚಾಲನೆ ನೀಡುವ ಮೂಲಕ ಅಭಿಯಾನ ಆರಂಭಿಸಲಾಯ್ತು. ನಂತ್ರ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಜೊತೆ ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರುವ ಮೂಲಕ ರ್ಯಾಲಿ ಆರಂಭಿಸಿದ್ರು. ಜನರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಈ ಜಾಥಾದಲ್ಲಿ ಪಾಲ್ಗೊಂಡಿದ್ರು. ಕಾರ್ಯಕ್ರಮದಲ್ಲಿ ಎಸ್ಪಿ ಋಷಿಕೇಶ್ ಭಗವಾನ್ ಸೋನವಣೆ, ಎಡಿಸಿ ಪ್ರಕಾಶ್ ಸಿಂಗ್ ರಜಪೂತ್, ಎಸಿ ಶಂಕರಗೌಡ ಸೋಮನಾಳ, ಡಿವೈಎಸ್ ಸಂತೋಷ್ ಬನಹಟ್ಟಿ ಹಾಜರಿದ್ರು.