ಕೊಪ್ಪಳ ಜಿಲ್ಲಾದ್ಯಂತ ಸರಳ ಆಯುಧ ಪೂಜೆ.. - ಕೊಪ್ಪಳ
ಕೊಪ್ಪಳ ಜಿಲ್ಲೆಯಾದ್ಯಂತ ಆಯುಧ ಪೂಜೆಯನ್ನು ಸರಳವಾಗಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಆಯುಧಗಳು ಸೇರಿದಂತೆ ಇಲಾಖೆಯ ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು. ಇನ್ನು ಜನರು ತಮ್ಮ ಮನೆಯಲ್ಲಿನ ಆಯುಧಗಳು, ವಾಹನಗಳಿಗೆ ಪೂಜೆ ಸಲ್ಲಿಸುತ್ತಿದ್ದಾರೆ.