ಹಾಸನದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಉಚಿತ ಔಷಧಿ ವಿತರಣೆ - ಕೊರೊನಾವೈರಸ್ ಸುರಕ್ಷತೆ
ಹಾಸನ: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ತಡೆಗಟ್ಟಲು ಹಾಸನ ಜಿಲ್ಲಾ ಆಯುಷ್ ಕಚೇರಿಯಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಸಾರ್ವಜನಿಕರಿಗೆ ಉಚಿತವಾಗಿ ಔಷಧಿ ಕೊಡಲಾಗುತ್ತಿದೆ. ನಗರದ ಹೊಸಲೈನ್ ರಸ್ತೆ ಬಳಿ ಇರುವ ಜಿಲ್ಲಾ ಆಯುಷ್ ಕಚೇರಿಯಲ್ಲಿ ಕಳೆದ ತಿಂಗಳಿನಿಂದ ಸಾರ್ವಜನಿಕರಿಗೆ ಉಚಿತವಾಗಿ ಔಷಧಿ ವಿತರಣೆ ನಡೆಯುತ್ತಿದೆ. ಆಧಾರ್ ಕಾರ್ಡ್ ಸಂಖ್ಯೆ ಮತ್ತು ದೂರವಾಣಿ ಸಂಖ್ಯೆ ನಮೂದಿಸಿಕೊಂಡು ಔಷಧಿ ನೀಡುತ್ತಿದ್ದೇವೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ವೀಣಾ ಲತಾ ತಿಳಿಸಿದರು.