ವಿಶೇಷ ಪ್ಯಾಕೇಜ್ ಘೋಷಣೆ ಕಣ್ಣೊರೆಸುವ ತಂತ್ರ ಅಷ್ಟೇ: ಬಡಗಲಪುರ ನಾಗೇಂದ್ರ - ಲಾಕ್ಡೌನ್ ಪ್ಯಾಕೇಜ್
ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವಿಧ ವಲಯಗಳಿಗೆ ಪ್ಯಾಕೇಜ್ ಘೋಷಣೆ ಮಾಡಿರುವುದು ಕಣ್ಣೊರೆಸುವ ತಂತ್ರ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜನಸಾಮಾನ್ಯರಿಗೆ ಸ್ಪಂದಿಸುವ ಹಾಗೂ ಯಾವುದೇ ವರ್ಗಕ್ಕೆ ಲಾಭ ಇಲ್ಲ ಎಂದು ಕಿಡಿಕಾರಿದ್ದಾರೆ.