ಕೋಲಾರದಲ್ಲಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಸಂಸದ ಮುನಿಸ್ವಾಮಿ ಚಾಲನೆ.. - ಕೋಲಾರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಸುದ್ದಿ
ಕೋಲಾರ ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಸಂಸ್ಥೆ ಹಾಗೂ ಕೋಲಾರ ಕ್ರೀಡಾ ಸಂಘ ಸಹಯೋಗದೊಂದಿಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ 2 ದಿನಗಳ ರಾಜ್ಯ ಮಟ್ಟದ ಪುರುಷ ಮತ್ತು ಮಹಿಳೆಯರ ಸೀನಿಯರ್ ಎ ಡಿವಿಜನ್ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಸಂಸದ ಎಸ್.ಮುನಿಸ್ವಾಮಿ ಚಾಲನೆ ನೀಡಿದರು. ಕ್ರಿಡಾಕೂಟದಲ್ಲಿ ಏಕಲವ್ಯ ಪ್ರಶಸ್ತಿ ವಿಜೇತ ಕ್ರೀಡಾಪಟು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದ ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಇದೇ ವೇಳೆ ಮೈದಾನದಲ್ಲಿ ಸಂಸದ ಮುನಿಸ್ವಾಮಿ, ಕೋಲಾರ ಶಾಸಕ ಶ್ರೀನಿವಾಸಗೌಡ ಹಾಗೂ ಜಿಲ್ಲಾಧಿಕಾರಿ ಜೆ.ಮಂಜುನಾಥ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ವೆಂಕಟೇಶ್ ಕೆಲಕಾಲ ಬಾಲ್ ಬ್ಯಾಡ್ಮಿಂಟನ್ ಆಡಿದರು. ಸೆಮಿಪೈನಲ್ವರೆಗೆ ಆಗಮಿಸುವ ಎಲ್ಲಾ ತಂಡಗಳಿಗೂ ಪ್ರಶಸ್ತಿ ನೀಡುವುದಾಗಿ ಸಂಸದರು ಕಾರ್ಯಕ್ರಮದಲ್ಲಿ ಘೋಷಣೆ ಮಾಡಿದ್ರು.