ಕಾಗಿನೆಲೆ ಕೆರೆಗೆ ಬಾಗಿನ ಅರ್ಪಿಸಿದ ಬಸವರಾಜ ಬೊಮ್ಮಾಯಿ - Kaginele Lake
ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಕಾಗಿನೆಲೆ ಕೆರೆಗೆ ತುಂಗಾ ಮೇಲ್ದಂಡೆ ಕಾಲುವೆಯಿಂದ ನೀರು ಹರಿಸಿದ್ದರಿಂದ ಕೆರೆ ಭರ್ತಿಯಾಗಿದೆ. ಕೆರೆ ತುಂಬಿದ್ದರಿಂದ ಇವತ್ತು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದ್ರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಹಾಜರಿದ್ರು. ಇದಕ್ಕೂ ಮೊದಲು ಕಾಗಿನೆಲೆಯ ಕನಕ ಗುರುಪೀಠಕ್ಕೆ ಭೇಟಿ ನೀಡಿದ ಸಚಿವರು ಹಾಗೂ ಸಂಸದ ಶಿವಕುಮಾರ ಉದಾಸಿ, ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಅವರನ್ನು ಮಠದ ನಿರಂಜನಾನಂದಪುರಿ ಸ್ವಾಮೀಜಿ ಸನ್ಮಾನಿಸಿ ಗೌರವಿಸಿದ್ರು.