ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಆಗ್ರಹ - ಲಟೆಸ್ಟ್ ಬೆಳಗಾವಿ ನ್ಯೂಸ್
ಗೋಕಾಕ್ ಕ್ಷೇತ್ರದ ಉಪಚುನಾವಣೆಯಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಕಾಂಗ್ರೆಸ್ ಹಿರಿಯ ಮುಖಂಡ ಬಸವಣೆಪ್ಪ ಕಂಬಾರ ಆಗ್ರಹಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, 2008ಕ್ಕೂ ಮುನ್ನ ಗೋಕಾಕ್ ಕ್ಷೇತ್ರ 40 ವರ್ಷ ಪರಿಶಿಷ್ಟ ಪಂಗಡ ವರ್ಗಕ್ಕೆ ಮೀಸಲಾಗಿತ್ತು. 2008ರಿಂದ ಈ ಕ್ಷೇತ್ರ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗೆ ಟಿಕೆಟ್ ನೀಡದೆ ಕಾಂಗ್ರೆಸ್ ಮೂರು ಬಾರಿ ರಮೇಶ್ ಜಾರಕಿಹೊಳಿಗೆ ಟಿಕೆಟ್ ನೀಡಿತ್ತು. ಇದೀಗ ರಮೇಶ್ ಅನರ್ಹರಾಗಿದ್ದು, ಗೋಕಾಕ್ ಕ್ಷೇತ್ರದಲ್ಲಿ ಉಪಚುನಾವಣೆ ಎದುರಾಗಿದೆ. ಈ ಸಲವಾದರೂ ಕಾಂಗ್ರೆಸ್ ನಾಯಕರು ಸಾಮಾನ್ಯ ವರ್ಗದ ಅಭ್ಯರ್ಥಿಗೆ ಟಿಕೆಟ್ ನೀಡಬೇಕು. ಈಗಾಗಲೇ 6 ಜನ ಸಾಮಾನ್ಯ ವರ್ಗದ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಕ್ಷೇತ್ರದಲ್ಲಿ 1 ಲಕ್ಷ ಲಿಂಗಾಯತರು, 50 ಸಾವಿರ ಮುಸ್ಲಿಮರಿದ್ದಾರೆ. ಹೀಗಾಗಿ ಸಾಮಾನ್ಯ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಬಸವಣೆಪ್ಪ ಪಕ್ಷದ ನಾಯಕರಿಗೆ ಆಗ್ರಹಿಸಿದರು.