ಕರ್ನಾಟಕ

karnataka

ETV Bharat / videos

ಬಿಬಿಎಂಪಿ ಚುನಾವಣೆಗೆ ನಾಮಪತ್ರ ಸಲ್ಲಿಕೆ: ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲ - ಬಿಜೆಪಿ ಅಭ್ಯರ್ಥಿಗಳ ಆಯ್ಕೆ

By

Published : Oct 1, 2019, 10:07 AM IST

ಬೆಂಗಳೂರು: ಬಿಬಿಎಂಪಿಯ ಮೇಯರ್​ ಹಾಗೂ ಉಪಮೇಯರ್​ ಚುನಾವಣೆಗೆ ಬಿಜೆಪಿ, ಜೆಡಿಎಸ್​ ಹಾಗೂ ಕಾಂಗ್ರೆಸ್​ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಬಿಜೆಪಿಯಿಂದಲೇ ಮೇಯರ್​ ಸ್ಥಾನಕ್ಕೆ ಇಬ್ಬರು ಹಾಗೂ ಮೂವರು ಅಭ್ಯರ್ಥಿಗಳು ಉಪ ಮೇಯರ್ ಸ್ಥಾನಕ್ಕೆ ನಾಮ ಪತ್ರ ಸಲ್ಲಿಕೆ ಮಾಡಿದ್ದು, ಅಭ್ಯರ್ಥಿ ಆಯ್ಕೆಯಲ್ಲಿ ಗೊಂದಲ ಮೂಡಿಸಿದೆ. ಬಿಜೆಪಿಯ ಗೌತಮ್, ಪದ್ಮನಾಭ ರೆಡ್ಡಿ ಮೇಯರ್​ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಉಪಮೇಯರ್​ ಸ್ಥಾನಕ್ಕೆ ಗುರುಮೂರ್ತಿರೆಡ್ಡಿ, ಮಹಾಲಕ್ಷ್ಮಿ, ರಾಮಮೋಹನ ರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್​ನಿಂದ ಸತ್ಯ ನಾರಾಯಣ ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರೆ, ಜೆಡಿಎಸ್​ನಿಂದ ಗಂಗಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ABOUT THE AUTHOR

...view details